ಹಲವು ರಾಜ್ಯಗಳ ಸಂಸದರೊಂದಿಗೆ ಪ್ರಧಾನಿ ಮೋದಿ ಚರ್ಚೆ

ಬುಧವಾರ, 29 ಮಾರ್ಚ್ 2017 (15:48 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಭಿವೃದ್ಧಿ ಕಾರ್ಯಗಳ ಕುರಿತಂತೆ ಹಲವು ರಾಜ್ಯಗಳ ಸಂಸದರೊಂದಿಗೆ ಚರ್ಚೆ ನಡೆಸಿದ್ದಾರೆ.
 
ಸಂಸದರು ತಮ್ಮ ತಮ್ಮ ಕ್ಷೇತ್ರಗಳಲ್ಲಿರುವ ಜನರೊಂದಿಗೆ ಬೆರೆತು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ತಾವು ಮಾಡಿದ ಕಾರ್ಯಗಳನ್ನು ಶೇರ್ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
 
ಜನತೆಗೆ ಅಗತ್ಯವಾದ ರಸ್ತೆ, ನೀರು, ವಿದ್ಯುತ್, ಆಸ್ಪತ್ರೆ, ಶಿಕ್ಷಣ ಸೇರಿದಂತೆ ಮೂಲಭೂತ ಕ್ಷೇತ್ರಗಳ ಅಭಿವೃದ್ಧಿಯತ್ತ ಗಮನಹರಿಸಿದಲ್ಲಿ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
 
ಸಂಸದರು ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೃಹತ್ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮುತ್ತಿದ್ದು, ಜಿಎಸ್‌ಟಿ ಮಸೂದೆ ಜಾರಿ ನಂತರ ಆರ್ಥಿಕತೆಯಲ್ಲಿ ಮತ್ತಷ್ಟು ಚೇತರಿಕೆ ಕಾಣಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ