ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡುತ್ತಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ 2014ರಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಮೋದಿ ಅವರು ಭೃಷ್ಟಾಚಾರಿಗಳನ್ನು ಶಿಕ್ಷೆಗೊಳಪಡಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಎರಡು ವರ್ಷಗಳಾದರೂ ಭೃಷ್ಟಾಚಾರಿಗಳ್ಯಾರೂ ಜೈಲಿಗೆ ಹೋಗಿಲ್ಲ. ಆಗಸ್ಟಾ ಪ್ರಕರಣದ ತನಿಖೆ ಒಂದು ಇಂಚು ಕೂಡ ಮುಂದೆ ಹೋಗಿಲ್ಲ ಎಂದು ಕಿಡಿಕಾರಿದ್ದಾರೆ.
ಜಂತರ್ ಮಂತರ್‌ನಲ್ಲಿ ಜಮಾವಣೆಗೊಂಡಿರುವ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದು, ಸೋನಿಯಾ ಅವರನ್ನು ಕೂಡಲೇ ಬಂಧಿಸಲಿ ಎಂದು ಆಗ್ರಹಿಸುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.