ಆಯೋಗದ ಅನುಮತಿ ಪಡೆಯದೇ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿದ್ದರೂ ಚುನಾವಣೆ ಆಯೋಗ ಏಕೆ ಕಣ್ಣು ಮುಚ್ಚಿ ಕುಳಿತಿದೆ ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾರಣಾಸಿಯಲ್ಲಿ ರೋಡ್‌ಶೋ ನಡೆಸುತ್ತಿರುವ ಪ್ರಧಾನಿ ಮೋದಿ ಚುನಾವಣೆ ಆಯೋಗದ ಅನುಮತಿ ಪಡೆಯಬೇಕಾಗಿತ್ತು. ಆದರೆ, ಅನುಮತಿ ಪಡೆಯದೆ ಕಾನೂನುಬಾಹಿರವಾಗಿ ರೋಡ್ ಶೋ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಉತ್ತರಪ್ರದೇಶದ ಆರನೇ ಹಂತದ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಬಿಜೆಪಿ ಪಕ್ಷ ಉತ್ತರಪ್ರದೇಶದಲ್ಲಿ ಸುಲಭವಾಗಿ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಾದ ಅಖಿಲೇಶ್ ಯಾದವ್ ಮತ್ತು ರಾಹುಲ್ ಗಾಂಧಿ ಕೂಡಾ ಇಂದು ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.