ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ
ಸರಿಯಾದ ಸಮಯಕ್ಕೆ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿ ಶುಭ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ದಶಾಶ್ವಮೇಧ ಘಾಟ್ ನಲ್ಲಿ ಪುಣ್ಯ ಸ್ನಾನ ಮಾಡಿ ಗಂಗಾರತಿ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ಗಂಗೆ ನನ್ನನ್ನು ದತ್ತು ಪಡೆದಿದ್ದಾಳೆ ಎಂದು ಭಾವುಕರಾಗಿ ಹೇಳಿದ್ದಾರೆ.
ವೇದಮಂತ್ರಗಳ ಘೋಷದ ನಡುವೆ ಮೋದಿ ಗಂಗೆಗೆ ಪೂಜೆ ಸಲ್ಲಿಸಿದರು. ಕಳೆದ ಬಾರಿಯೂ ನಾಮಪತ್ರ ಸಲ್ಲಿಕೆಗೆ ಮೊದಲು ಮೋದಿ ಗಂಗೆಗೆ ಪೂಜೆ ಸಲ್ಲಿಸಿದ್ದರು. ನಿನ್ನೆಯಿಂದ ಪ್ರಧಾನಿ ಮೋದಿ ತಮ್ಮ ಸ್ವಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ. ಇಲ್ಲಿ ಸುಮಾರು 5 ಕಿ.ಮೀ.ಗಳ ಬೃಹತ್ ರೋಡ್ ಶೋ ನಡೆಸಿದ್ದರು.
ಈ ವೇಳೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಿದ್ದಾರೆ. ಇದು ಮೂರನೇ ಬಾರಿಗೆ ಮೋದಿ ವಾರಣಾಸಿಯಿಂದ ಸ್ಪರ್ಧೆ ನಡೆಸುತ್ತಿದ್ದಾರೆ. ಕಳೆದ ಎರಡೂ ಬಾರಿಯೂ ಮೋದಿಗೆ ಇಲ್ಲಿ ಭಾರೀ ಅಂತರದ ಗೆಲುವು ಸಿಕ್ಕಿದೆ. ಈಗ ಮತ್ತೊಮ್ಮೆ ಆಯ್ಕೆಯಾಗುವ ವಿಶ್ವಾಸದಲ್ಲಿದ್ದಾರೆ.