ಸಿಎಂ ಕುಮಾರಸ್ವಾಮಿಗೆ ಫಿಟ್ನೆಸ್ ಚಾಲೆಂಜ್ ಹಾಕಿದ ಪ್ರಧಾನಿ ಮೋದಿ
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಧಾನಿ ಮೋದಿಗೆ ಫಿಟ್ನೆಸ್ ಸವಾಲು ಹಾಕಿದ್ದರು. ಅದರಂತೆ ಆಹ್ವಾನ ಸ್ವೀಕರಿಸಿದ ಪ್ರಧಾನಿ ಮೋದಿ ತಮ್ಮ ಬೆಳಗಿನ ವ್ಯಾಯಾಮದ ವಿಡಿಯೋ ಟ್ವಿಟರ್ ಮೂಲಕ ಪ್ರಕಟಿಸಿದ್ದಲ್ಲದೆ, ಕರ್ನಾಟಕ ಸಿಎಂ ಕುಮಾರಸ್ವಾಮಿ ಮತ್ತು 40 ವರ್ಷ ದಾಟಿದ ಎಲ್ಲಾ ಐಪಿಎಸ್ ಅಧಿಕಾರಿಗಳಿಗೆ ಸವಾಲು ಹಾಕಿದ್ದಾರೆ.
ಕುಮಾರಸ್ವಾಮಿ ಕೂಡಾ ತಮ್ಮ ದೇಹದ ಆರೋಗ್ಯಕ್ಕಾಗಿ ಕೆಲವು ದೈಹಿಕ ಕಸರತ್ತು ನಡೆಸುವುದಾಗಿ ಈ ಮೊದಲು ಹೇಳಿಕೊಂಡಿದ್ದರು. ಇದೀಗ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿ ಆಹ್ವಾನವನ್ನು ಸ್ವೀಕರಿಸುತ್ತಾರಾ ಕಾದು ನೋಡಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.