LPG cylinder price: ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಗಿಫ್ಟ್: ಸಿಲಿಂಡರ್ ಬೆಲೆ ಇಳಿಕೆ

Krishnaveni K

ಶುಕ್ರವಾರ, 8 ಮಾರ್ಚ್ 2024 (09:20 IST)
Photo Courtesy: Twitter
ನವದೆಹಲಿ: ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆವಾಗಿದ್ದು, ಪ್ರಧಾನಿ ಮೋದಿ ಕುಟುಂಬ ಮುನ್ನಡೆಸುವ ಮಹಿಳೆಯರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಮಹಿಳಾ ದಿನವೇ ಎಲ್ ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 100 ರೂ.ಗಳಷ್ಟು ಇಳಿಕೆ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾ ಎಕ್ಸ್ ಮೂಲಕ ಮಹಿಳೆಯರಿಗೆ ಈ ಕೊಡುಗೆ ನೀಡುತ್ತಿರುವುದಾಗಿ ಮೋದಿ ಘೋಷಿಸಿದ್ದಾರೆ. ಮಹಿಳೆಯರ ಸಬಲೀಕರಣಕ್ಕಾಗಿ ಈ ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ. ಇದರಿಂದ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆ ತಕ್ಕ ಮಟ್ಟಿಗೆ ಕಡಿಮೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ.

‘ಇಂದು ಮಹಿಳಾ ದಿನದಂದು ನಮ್ಮ ಸರ್ಕಾರವು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ.ಗಳಷ್ಟು ಕಡಿಮೆ ಮಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮ ನೋಡಿಕೊಳ್ಳುವುದರ ಜೊತೆಗೆ ಆರೋಗ್ಯಕರ ವಾತಾವರಣ ಸೃಷ್ಟಿಸುವ ಗುರಿ ಹೊಂದಿದ್ದೇವೆ’ ಎಂದು ಮೋದಿ ಹೇಳಿದ್ದಾರೆ.

ಆದರೆ ಮೋದಿಯ ಈ ನಿರ್ಧಾರಕ್ಕೆ ಕಾಮೆಂಟ್ ಮೂಲಕ ಟಾಂಗ್ ಕೊಟ್ಟವರೂ ಇದ್ದಾರೆ. ಮಹಿಳೆಯರು ಮಾತ್ರ ಸಿಲಿಂಡರ್ ಗೆ ಹಣ ಪಾವತಿ ಮಾಡಲ್ಲ ಎಂದು ಕೆಲವರು ಹೇಳಿದರೆ ಮತ್ತೆ ಕೆಲವರು ಈ ಮೂಲಕ ಮಹಿಳೆಯರು ಅಡುಗೆ ಮನೆಗೆ ಮಾತ್ರ ಸೀಮಿತ ಎಂದು ಸಂದೇಶ ನೀಡಿದ್ದೀರಿ ಎಂದು ಟಾಂಗ್ ಕೊಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ