ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಜಮ್ಮು ಕಾಶ್ಮೀರ ನಾಯಕರ ಮೀಟಿಂಗ್
ಗುರುವಾರ, 24 ಜೂನ್ 2021 (10:25 IST)
ನವದೆಹಲಿ: ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರ ನಾಯಕರೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಕಾಶ್ಮೀರ ರಾಜ್ಯದಲ್ಲಿ ಹೊಸದಾಗಿ ಚುನಾವಣೆ ಮತ್ತು ಆಡಳಿತ ವ್ಯವಸ್ಥೆ ಪುನಸ್ಥಾಪಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ. ಇದಕ್ಕಾಗಿ ಈಗಾಗಲೇ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳು, ಪ್ರಮುಖ ರಾಜಕೀಯ ನೇತಾರರನ್ನು ಆಹ್ವಾನಿಸಲಾಗಿದೆ.
ಈ ಸಭೆಯಲ್ಲಿ ಪ್ರಧಾನಿ ಮೋದಿ ಅಲ್ಲದೆ, ಗೃಹ ಸಚಿವ ಅಮಿತ್ ಶಾ ಕೂಡಾ ಪಾಲ್ಗೊಳ್ಳಲಿದ್ದಾರೆ. ಇನ್ನು, ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನಡೆಯುತ್ತದೆ ಎಂಬ ಸುದ್ದಿ ತಿಳಿದ ತಕ್ಷಣವೇ ಪಾಕಿಸ್ತಾನಕ್ಕೆ ಚಿಂತೆ ಹೆಚ್ಚಾಗಿದೆ.