ಕರ್ನಾಟಕ ಸೇರಿದ ಆರು ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ
ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯ ಮುಖ್ಯಮಂತ್ರಿಗಳು ಪ್ರಧಾನಿ ಜೊತೆಗೆ ಇಂದು 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚು ಕಂಡುಬರುವ ಹಿನ್ನಲೆಯಲ್ಲಿ ಅದನ್ನು ಎದುರಿಸುವ ಬಗೆ ಬಗ್ಗೆ ಸಭೆಯಲ್ಲಿ ಸಲಹೆ ಸೂಚನೆ ನೀಡುವ ಸಾಧ‍್ಯತೆಯಿದೆ.