ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸಚಿವರಿಗೆ ಮೋದಿ ಸಲಹೆ

ಮಂಗಳವಾರ, 31 ಮಾರ್ಚ್ 2015 (16:02 IST)
ಪ್ರಧಾನಮಂತ್ರಿ ನರೇಂದ್ರ ಮೋದಿ 13 ಸಚಿವರ ಕಾರ್ಯವೈಖರಿಯನ್ನು ಪರಿಶೀಲನೆಗೊಳಪಡಿಸಿದ್ದು, ಸಾರ್ವಜನಿಕರಿಂದ ನಿಮ್ಮ ಕೆಲಸದ ಬಗ್ಗೆ ಅಭಿಪ್ರಾಯಗಳನ್ನು ಪಡೆದು ಬನ್ನಿ ಎಂದು ಸಲಹೆ ನೀಡಿದ್ದಾರೆ.

ಮೋದಿಯವರು ಎಂದು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ರಾಜ್ಯ ಸಚಿವರುಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಚರ್ಚಿಸಿದರು. ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡಾ ಉಪಸ್ಥಿತರಿದ್ದರು ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.

ನೀವು ಯಾವುದಾದರೂ ಸಮಸ್ಯೆಗಳನ್ನು ಎದುರಿಸುತ್ತಿದ್ದೀರಾ? ನನ್ನೊಂದಿಗೆ ಹಾಗೂ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಿ. ಸಾರ್ವಜನಿಕರಿಗೆ ಹಿತವಾಗುವಂತಹ ನೀತಿಗಳನ್ನು ಜಾರಿಗೆ ತನ್ನಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಪ್ರಧಾನಿಯವರೊಂದಿಗೆ ಸಭೆಯಲ್ಲಿ ಪಾಲ್ಗೊಂಡ ನಂತರ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಇದೊಂದು ಉತ್ತಮ ಸಭೆ ಮುಂಬರುವ ದಿನಗಳಲ್ಲಿ ನಿರಂತರವಾಗಿ ನಡೆಯಲಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಬಿಜೆಪಿ ಅಂತರಿಕ ವಿಷಯಗಳ ಬಗ್ಗೆ ಸಂಪರ್ಕ ಕಡಿದುಕೊಂಡಿರುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ ಎನ್ನಲಾಗಿದೆ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಚರ್ಚೆ ಹಾಗೂ ಸರಕಾರದ ಇಮೇಜ್‌ಗೆ ಋಣಾತ್ಮಕವಾಗುವಂತಹ ಯಾವುದೇ ವಿಷಯಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬಿಜೆಪಿಗೆ ಸಲಹೆ ನೀಡಿದೆ.

ವೆಬ್ದುನಿಯಾವನ್ನು ಓದಿ