ಡಾ.ಶ್ಯಾಮ್‌ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ: ಪ್ರಧಾನಿ ಮೋದಿ ಪ್ರಂಶಸೆ

ಸೋಮವಾರ, 6 ಜುಲೈ 2015 (15:57 IST)
ಜನಸಂಘ ಸಂಸ್ಥಾಪಕ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜನ್ಮದಿನಾಚರಣೆಯ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸೇವೆಯನ್ನು ಶ್ಲಾಘಿಸಿದ್ದಾರೆ.       
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ,  
 
ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ದೇಶಕ್ಕೆ ಸಲ್ಲಿಸಿದ ಸೇವೆಯಿಂದಾಗಿ ಶ್ರೇಷ್ಠ ನಾಯಕ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ.ಯುವಕರು ಸುಶಿಕ್ಷಿತರಾಗಬೇಕು ಎನ್ನುವ ಬಯಕೆ ಹೊಂದಿದ್ದರು. ಮುಖರ್ಜಿಯವರ ಚಿಂತನೆಗಳು ವಿಶ್ವದಾದ್ಯಂತ ಮೆಚ್ಚುಗೆಗೆ ಕಾರಣವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.  
 
ಕಳೆದ 1901ರ ಜುಲೈ 6 ರಂದು ಕೋಲ್ಕತಾದಲ್ಲಿ ಜನಿಸಿದ ಶ್ಯಾಮ್ ಪ್ರಸಾದ್ ಮುಖರ್ಜಿ, ಜವಾಹರಲಾಲ್ ಸಂಪುಟದಲ್ಲಿ ಕೇಂದ್ರ ಸಚಿವರಾಗಿದ್ದರು. ನಂತರ ಕಾಂಗ್ರೆಸ್ ಪಕ್ಷವನ್ನು ತೊರೆದು ಜನಸಂಘ ಎನ್ನುವ ಪಕ್ಷ ಸ್ಥಾಪಿಸಿದ್ದರು.  
 

ವೆಬ್ದುನಿಯಾವನ್ನು ಓದಿ