ಬಿಹಾರ್ ಸಿಎಂ ಅಭ್ಯರ್ಥಿ: ಪ್ರಧಾನಿ ಮೋದಿ ತೀರ್ಮಾನವೇ ಅಂತಿಮ ಎಂದ ಮಾಂಜಿ

ಸೋಮವಾರ, 31 ಆಗಸ್ಟ್ 2015 (16:45 IST)
ಬಿಹಾರ್ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀರ್ಮಾನವೇ ಅಂತಿಮ ಎಂದು ಬಿಹಾರ್ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಹೇಳಿದ್ದಾರೆ.
 
ಎನ್‌ಡಿಎ ಮೈತ್ರಿಕೂಟದಲ್ಲಿ ಮೋದಿಯವರ ಮೇಲೆ ವಿಶ್ವಾಸವಿಟ್ಟ ಅನೇಕ ನಾಯಕರು ಮುಖ್ಯಮಂತ್ರಿಯಾಗುವ ಅರ್ಹತೆ ಹೊಂದಿದ್ದಾರೆ. ಆದರೆ, ಅಂತಿಮ ನಿರ್ಧಾರ ಮೋದಿಯವರು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. 
 
ಬಿಹಾರ್ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಂತರಿಕ ಭದ್ರತೆಯ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ ನಂತರ ಮಾಂಜಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
 
ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಭದ್ರತಾ ವ್ಯವಸ್ಥೆ ಮಾಡಲಾಗುವುದು. ಮತದಾನ ಶಾಂತಿಪೂರ್ಣವಾಗಿರಲಿದೆ ಎಂದು ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ ಎಂದು ಬಿಹಾರ್ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ