ನವದೆಹಲಿ : ಭಾರತ-ಚೀನಾ ಗಡಿ ಸಂಘರ್ಷದ ಬಳಿಕ ಮೊದಲ ಬಾರಿಗೆ ಲೇಹ್ ಗಡಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.
ಸೇನಾಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ಲೇಹಗೆ ಭೇಟಿ ನೀಡಿದ್ದು, ಆ ಮೂಲಕ ಎಲ್ಲರಿಗೂ ಅಚ್ಚರಿ ನೀಡಿದ್ದಾರೆ. ಮೋದಿಗೆ ಸಿಡಿಎಸ್ ಬಿಪಿನ್ ರಾವತ್ ಸಾಥ್ ನೀಡಿದ್ದಾರೆ. ಆ ವೇಳೆ ಮೋದಿ ಗಾಯಾಳು ಯೋಧರ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಅಲ್ಲದೇ ಗಡಿ ಪರಿಸ್ಥಿತಿ ಬಗ್ಗೆ ಖುದ್ದು ಮೋದಿ ಪರಿಶೀಲನೆ ನಡೆಸಿದ್ದಾರೆ.