ಭಾರತದ ಒಲಿಂಪಿಕ್ಸ್ ಪಥಸಂಚಲನ ವೇಳೆ ಎದ್ದು ನಿಂತು ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಶನಿವಾರ, 24 ಜುಲೈ 2021 (10:24 IST)
ನವದೆಹಲಿ: ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಅಥ್ಲೆಟ್ ಗಳ ಪಥಸಂಚಲನವನ್ನು ಟಿವಿಯಲ್ಲಿ ವೀಕ್ಷಿಸಿದ ಪ್ರಧಾನಿ ಮೋದಿ ಎದ್ದು ನಿಂತು ಚಪ್ಪಾಳೆ ತಟ್ಟಿ ಗೌರವ ಸಲ್ಲಿಸಿದ್ದಾರೆ.
Photo Courtesy: Twitter


ಪಥ ಸಂಚಲನದ ನೇರಪ್ರಸಾರವನ್ನು ತಮ್ಮ ಕಾರ್ಯಾಲಯದಲ್ಲಿ ಕುಳಿತು ವೀಕ್ಷಿಸಿದ ಪ್ರಧಾನಿ ಮೋದಿ, ಭಾರತೀಯ ಕ್ರೀಡಾಪಟುಗಳು ಆಗಮಿಸುತ್ತಿದ್ದಂತೇ ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ಇನ್ನು, ಈ ನೇರಪ್ರಸಾರವನ್ನು ವೀಕ್ಷಿಸಿರುವ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಕೂಡಾ ಭಾರತ ತಂಡಕ್ಕೆ ಜೈಕಾರ ಕೂಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ