ದೇರಾ ಕಿಡಿಗೇಡಿಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ

ಭಾನುವಾರ, 27 ಆಗಸ್ಟ್ 2017 (12:23 IST)
ನವದೆಹಲಿ: ಹಿಂಸಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎನ್ನುವ ಮೂಲಕ ಹರಿಯಾಣದಲ್ಲಿ ದೇರಾ ಮುಖ್ಯಸ್ಥನ ಬಂಧನದ ನಂತರ ಹಿಂಸಾಚಾರ ನಡೆಸಿದ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

 
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇದು ಬುದ್ಧ, ಮಹಾತ್ಮಾ ಗಾಂಧಿಯವರು ಬಾಳಿದ ನೆಲ. ಇಲ್ಲಿ ಯಾವುದೇ ಕಾರಣಕ್ಕೂ ನಂಬಿಕೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಸಹಿಸಲಾಗದು. ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಈ ತಿಂಗಳ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತಮ್ಮ ತವರು ರಾಜ್ಯ ಗುಜರಾತ್, ಬಿಹಾರದ ನೆರೆ ಪರಿಸ್ಥಿತಿ ಬಗ್ಗೆ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೆ, ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಗೂ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ.. ಹಾರ್ದಿಕ್ ಪಾಂಡ್ಯ ಬಗ್ಗೆ ಟೀಂ ಇಂಡಿಯಾ ಆತಂಕ ದೂರ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ