ಮುಸ್ಲಿಂ ಮುಖಂಡರಿಗೆ ಪ್ರಧಾನಿ ಮೋದಿ ಸ್ಪೆಷಲ್ ಮನವಿ

ಬುಧವಾರ, 10 ಮೇ 2017 (06:55 IST)
ನವದೆಹಲಿ: ದೇಶದಲ್ಲಿ ತ್ರಿವಳಿ ತಲಾಖ್ ಬಗ್ಗೆ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿ ಈ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ.

 
ತ್ರಿವಳಿ ತಲಾಖ್ ಪದ್ಧತಿ ತೊಡೆದು ಹಾಕಲೇ ಬೇಕು ಎನ್ನುವ ಹಠಕ್ಕೆ ಬಿದ್ದಿರುವ ಪ್ರಧಾನಿ ಮೋದಿ ಮುಖಂಡರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ತ್ರಿವಳಿ ತಲಾಖ್ ವಿಚಾರದಲ್ಲಿ ರಾಜಕೀಯ ಬೆರೆಸಬೇಡಿ ಎಂದು ಮೋದಿ ಮನವಿ ಮಾಡಿದ್ದಾರೆ.

ತಮ್ಮನ್ನು ಭೇಟಿಯಾದ ಮುಸ್ಲಿಂ ಮುಖಂಡರ ಬಳಿ ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸುವ ವಿಚಾರವನ್ನು ಬೆಂಬಲಿಸುವಂತೆ ಪ್ರಧಾನಿ ಕೋರಿದ್ದಾರೆ. ಇದಕ್ಕೂ ಮೊದಲು ಜಮಾತ್ ಇಸ್ಲಾಮಿ ಹಿಂದ್ ಸಂಘಟನೆ ಮುಸ್ಲಿಂ ಧಾರ್ಮಿಕ ನಿಯಮವನ್ನು ಮುರಿಯಲು ಯಾವುದೇ ಸರ್ಕಾರಕ್ಕೂ ಸಾಧ್ಯವಿಲ್ಲ ಎಂದಿತ್ತು.

ಇದರ ಬದಲು ಮುಸ್ಲಿಮರನ್ನು ಸುಶಿಕ್ಷಿತರಾಗಿ ಮಾಡಬೇಕು. ಶೆರಿಯತ್ ಕಾನೂನಿನ ಬಗ್ಗೆ ತಿಳುವಳಿಕೆ ನೀಡಬೇಕು ಎನ್ನುವ ಮೂಲಕ ತ್ರಿವಳಿ ತಲಾಖ್ ನಿಷೇಧವನ್ನು ಪರೋಕ್ಷವಾಗಿ ವಿರೋಧಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ