ಎನ್‌ಡಿಎ ಪಕ್ಷ ಗೆಲ್ಲಿಸಿದ್ದಕ್ಕೆ ಪ್ರಧಾನಿ ಮೋದಿ ಧನ್ಯವಾದ

sampriya

ಮಂಗಳವಾರ, 4 ಜೂನ್ 2024 (20:48 IST)
ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿ ಎನ್‌ಡಿಎ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಗೆಲುವಿನ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ ಅವರು, ‘ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ಜನತಾ ಜನಾರ್ದನ್‌ಗೆ ವಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ. ನಮ್ಮ ಎಲ್ಲಾ ಕಾರ್ಯಕರ್ತರ ಶ್ರಮಕ್ಕಾಗಿ ನಾನು ಅಭಿನಂದಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳನ್ನು ವಿವರಿಸಲು ಪದಗಳು ಎಂದಿಗೂ ಸಾಲುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದಿಂದ 1.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನೂ ಎನ್‌ಡಿಎ ಒಕ್ಕೂಟ 290 ಸ್ಥಾನಗಳಲ್ಲಿ ಹಾಗೂ ಇಂಡಿಯಾ ಒಕ್ಕೂಟ 234 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ