PM Modi: ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

Krishnaveni K

ಸೋಮವಾರ, 12 ಮೇ 2025 (16:35 IST)
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪಹಲ್ಗಾಮ್ ದಾಳಿ ಬಳಿಕ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿತ್ತು. ಇದಾದ ಬಳಿಕ ಪಾಕಿಸ್ತಾನ ಕೂಡಾ ಭಾರತದ ವಿರುದ್ಧ ದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವಾಗಿ ಭಾರತವೂ ದಾಳಿ ನಡೆಸಿತ್ತು.

ಈಗ ಎರಡೂ ದೇಶಗಳು ಕದನವಿರಾಮ ಘೋಷಿಸಿವೆ. ಇದರ ನಡುವೆ ಇಂದು ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಕದನದ ಬಳಿಕ ಮೋದಿ ಇದೇ ಮೊದಲ ಬಾರಿಗೆ ಮಾತನಾಡುತ್ತಿದ್ದಾರೆ.

ಈ ವೇಳೆ ಭಾರತೀಯ ಸೇನೆಗೆ ಧನ್ಯವಾದ ಸಲ್ಲಿಸಲಿದ್ದಾರೆ. ಅಲ್ಲದೆ, ಆಪರೇಷನ್ ಸಿಂಧೂರ್ ಯಾಕಾಗಿ ನಡೆಯಿತು, ಹೇಗೆ ನಡೆಯಿತು ಎಂಬ ಬಗ್ಗೆಯೂ ಮಾತನಾಡಲಿದ್ದಾರೆ ಎನ್ನಲಾಗಿದೆ. ಮೋದಿ ಭಾಷಣವನ್ನು ಈಗ ಇಡೀ ದೇಶವೇ ಎದಿರು ನೋಡುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ