ಮಸ್ಕತ್ ಭೇಟಿ ವೇಳೆ ದಾಖಲೆ ಮಾಡಲಿದ್ದಾರೆ ಪ್ರಧಾನಿ ಮೋದಿ!

ಮಂಗಳವಾರ, 6 ಫೆಬ್ರವರಿ 2018 (11:00 IST)
ನವದೆಹಲಿ: ಫೆಬ್ರವರಿ 11 ರಿಂದ ಪಶ್ಚಿಮ ಏಷ್ಯಾ ರಾಷ್ಟ್ರಗಳ ಪ್ರವಾಸ ಮಾಡಲಿರುವ ಪ್ರಧಾನಿ ಮೋದಿ ಹೊಸ ದಾಖಲೆಯೊಂದಕ್ಕೆ ಅಡಿಗಲ್ಲು ಹಾಕಲಿದ್ದಾರೆ.
 

ಮಸ್ಕತ್ ನಲ್ಲಿ ಐತಿಹಾಸಿಕ ಭಾಷಣ ಮಾಡಲಿರುವ ಪ್ರಧಾನಿ ಮೋದಿ ಅಬು ದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ಅರೆಬಿಕ್ ರಾಷ್ಟ್ರದಲ್ಲಿ ಹಿಂದೂ ದೇವಾಲಯವೊಂದು ನಿರ್ಮಾಣವಾಗುತ್ತಿದ್ದು, ಅದಕ್ಕೆ ಅಲ್ಲಿನ ಸರ್ಕಾರ ಭೂಮಿ ಮಂಜೂರು ಮಾಡಿದೆ.

ಈ ಎಲ್ಲಾ ಗೌರವಗಳೂ ಮೋದಿ ಪಾಲಾಗಲಿದೆ. ಇಲ್ಲಿನ ಜನಸಂಖ್ಯೆಯಲ್ಲಿ ಶೇ. 30 ರಷ್ಟು ಭಾರತೀಯರಿದ್ದಾರೆ. ಇವರು ಮೋದಿ ಭಾಷಣಕ್ಕೆ ಸಾಕ್ಷಿಯಾಗುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ