ಇಂದು ಮತ್ತು ನಾಳೆ ರಾಜ್ಯಗಳ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿರುವ ಪ್ರಧಾನಿ ಮೋದಿ

ಮಂಗಳವಾರ, 16 ಜೂನ್ 2020 (10:25 IST)
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಪ್ರಧಾನಿ ಮೋದಿ ರಾಜ್ಯಗಳ ಸಿಎಂ ಜೊತೆ ಮಹತ್ವದ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.


ಕೊರೊನಾ ವಿಚಾರವಾಗಿ ಎಲ್ಲಾ ರಾಜ್ಯಗಳ ಜೊತೆ ಮೋದಿ ಚರ್ಚೆ.ಅಟ್ಟಹಾಸ ಮೇರೆಯುತ್ತಿರುವ ಕೊರೊನಾ ಕಟ್ಟಿ ಹಾಕಲು ಪ್ರಧಾನಿ ಮೋದಿ ರಾಜ್ಯದ ಮುಖ್ಯಮಂತ್ರಿಗಳಿಗೆ ಸಲಹೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.


ಇಂದು ಪಂಜಾಬ್, ಅಸ್ಸಾಂ, ಕೇರಳ, ಉತ್ತರಾಖಂಡ, ಜಾರ್ಖಂಡ್, ಛತ್ತೀಸ್ ಘಡ, ತ್ರಿಪುರ, ಹಿಮಾಚಲ ಪ್ರದೇಶ, ಚಂಡೀಗಢ, ಗೋವಾ, ಮಣಿಪುರ, ನಾಗಾಲ್ಯಾಂಡ್, ಲಡಾಖ್, ಪುದುಚೇರಿ, ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ, ಸಿಕ್ಕಿಂ ಮತ್ತು ಲಕ್ಷದ್ವೀಪಸೇರಿ ಒಟ್ಟು 21 ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಚರ್ಚೆ ನಡೆಸಲಿದ್ದಾರೆ. ಹಾಗೇ ನಾಳೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಆಂಧ್ರಪ್ರದೇಶ, ಹರಿಯಾಣ, ಜಮ್ಮು ಕಾಶ್ಮೀರ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳ ಸಿಎಂ ಜೊತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ