ಜನ್ಮ ದಿನದಂದು ನರ್ಮದಾ ಅಣೆಕಟ್ಟು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಭಾನುವಾರ, 17 ಸೆಪ್ಟಂಬರ್ 2017 (08:56 IST)
ನವದೆಹಲಿ: ಪ್ರಧಾನಿ ಮೋದಿ ಜನ್ಮದಿನ ಇಂದು. ಇಂತಹ ಶುಭ ಸಂದರ್ಭದಲ್ಲಿ ಪ್ರಧಾನಿ ಮೋದಿ ಸರ್ದಾರ್ ಸರೋವರ್ ಅಣೆಕಟ್ಟನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.

 
1961 ರಲ್ಲಿ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಅವರಿಂದ ಶಂಕುಸ್ಥಾಪನೆಗೊಂಡ ಅಣೆಕಟ್ಟು ಇಂದು ಲೋಕಾರ್ಪಣೆಯಾಗಲಿದೆ. ಹಲವು ಅಡೆತಡೆಗಳನ್ನು ದಾಟಿ ಕೊನೆಗೂ ಮೂರು ರಾಜ್ಯಗಳಿಗೆ ಅನುಕೂಲವಾಗಲಿರುವ ನರ್ಮದಾ ನದಿಗೆ ಕಟ್ಟಲಾಗಿರುವ ಅಣೆಕಟ್ಟು ಉದ್ಘಾಟನೆಯಾಗಲಿದೆ.

ಅತೀ ದೊಡ್ಡ ಅಣೆಕಟ್ಟನ್ನು ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸಲಿರುವ ಪ್ರಧಾನಿ ನಂತರ ತಮ್ಮ ತಾಯಿಯನ್ನು ಭೇಟಿಯಾಗಿ ಜನ್ಮದಿನದ ಅಂಗವಾಗಿ ಆಶೀರ್ವಾದ ಪಡೆಯಲಿದ್ದಾರೆ. ಇನ್ನೊಂದೆಡೆ ಪ್ರಧಾನಿ ಜನ್ಮದಿನದ ಅಂಗವಾಗಿ ಬಿಜೆಪಿ ದೇಶಾದ್ಯಂತ ಸ್ವಚ್ಛತಾ ಕಾರ್ಯಕ್ರಮ, ಬಡವರಿಗೆ ಆಹಾರವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಇದನ್ನೂ ಓದಿ.. ಆಸೀಸ್ ಹಣಿಯಲು ಹೊರಟ ಕೊಹ್ಲಿಗೆ ಆಟಗಾರರದ್ದೇ ಚಿಂತೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ