ಹೇಗಿದೆ ತಯಾರಿ?: ಅಯೋಧ್ಯೆ ರಾಮಮಂದಿರ ವೀಕ್ಷಣೆಗೆ ಇಂದು ಮೋದಿ ಆಗಮನ

ಶನಿವಾರ, 30 ಡಿಸೆಂಬರ್ 2023 (09:20 IST)
ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿಯಿದ್ದು, ತಯಾರಿಗಳು ಭರದಿಂದ ಸಾಗುತ್ತಿದೆ.
 

ಇಂದು ರಾಮಮಂದಿರ ಉದ್ಘಾಟನೆ ತಯಾರಿಯನ್ನು ಖುದ್ದಾಗಿ ವೀಕ್ಷಿಸಲು ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಇದಕ್ಕಾಗಿ ರಾಮಮಂದಿರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಆಗಮಿಸುತ್ತಿರುವ ಪ್ರಧಾನಿ ಮೋದಿ ಅಯೋಧ್ಯೆಗೆ ಭೇಟಿ ನೀಡಿ ಪೂರ್ವ ತಯಾರಿಗಳ ಪರಿಶೀಲನೆ ನಡೆಸಲಿದ್ದಾರೆ. ಜನವರಿ 22 ರಂದು ರಾಮಂದಿರ ಲೋಕಾರ್ಪಣೆ ಕಾರ್ಯಕ್ರಮ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯಲಿದೆ.

ಇಂದು ಪ್ರಧಾನಿ ಮೋದಿ ಸುಮಾರು 15,000 ಕೋಟಿ ರೂ.ಗಳ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ, ಅಯೋಧ್ಯಾ ಧಾಮ್ ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ ಸಾರ್ವಜನಿಕ ಸಭೆಯಲ್ಲೂ ಭಾಗವಹಿಸಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಎಲ್ಲಾ ಹಿನ್ನಲೆಯಲ್ಲಿ ದೇವಾಲಯ ನಗರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ