ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಮಂಗಳವಾರ, 20 ಜೂನ್ 2023 (10:02 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಮ್ಮ ಮೊದಲ ಈಜಿಪ್ಟ್ ಪ್ರವಾಸದಲ್ಲಿ 11ನೇ ಶತಮಾನದಲ್ಲಿ ನಿರ್ಮಾಣವಾದ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ.
 
ಮೊದಲ ವಿಶ್ವ ಯುದ್ಧದ ಅವಧಿಯಲ್ಲಿ ಈಜಿಪ್ಟ್ಗಾಗಿ ಹೋರಾಡಿ ಮಡಿದ ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಸೋಮವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಮೆರಿಕ, ಈಜಿಪ್ಟ್ ಪ್ರವಾಸ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಜೂನ್ 24 ಮತ್ತು 25 ರಂದು ಈಜಿಪ್ಟ್ಗೆ ಭೇಟಿ ನೀಡಲಿದ್ದಾರೆ. ಇದು ಈಜಿಪ್ಟ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಭೇಟಿಯಾಗಿದ್ದು, 1997ರ ಬಳಿಕ ಈಜಿಪ್ಟ್ಗೆ ತೆರಳಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿರುವ ಮೊದಲ ಪ್ರಧಾನಿಯೂ ಆಗಿದ್ದಾರೆ ಎಂದರು.

ಈ ವರ್ಷದ ಗಣರಾಜೋತ್ಸವದಲ್ಲಿ ಈಜಿಪ್ಟ್ ಪ್ರಧಾನಿ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದರು, ಆನಂತರ ಎರಡು ದೇಶಗಳ ನಡುವಿನ ಒಡನಾಟ ಹೆಚ್ಚಿದೆ. ಭಾರತದ ವಿದೇಶಾಂಗ ಸಚಿವ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈಜಿಪ್ಟ್ಗೆ ಭೇಟಿ ನೀಡಿದ್ದರು. ಈಜಿಪ್ಟ್ನ ಮೂರ್ನಾಲ್ಕು ಮಂದಿ ಸಚಿವರು ತಮ್ಮ ನಿಯೋಗದೊಂದಿಗೆ ಭಾರತಕ್ಕೆ ಬಂದಿದ್ದರು. 

ಕೈರೋ ತಲುಪಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲು ಭಾರತದ ಘಟಕದೊಂದಿಗೆ ಸಂವಾದ ನಡೆಸಲಿದ್ದಾರೆ, ನಂತರ ಈಜಿಪ್ಟ್ನಲ್ಲಿರುವ ಸಣ್ಣ ಭಾರತೀಯ ಸಮುದಾಯದೊಂದಿಗೆ ಸಭೆ ನಡೆಸಲಿದ್ದಾರೆ. ಈಜಿಪ್ಟ್ನ ಕೆಲವು ಪ್ರಮುಖ ಗಣ್ಯರನ್ನ ಭೇಟಿ ಮಾಡಿದ ಬಳಿಕ ಅವರು ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ