ನವದೆಹಲಿ: ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ರಾಜಕೀಯ ಜೀವನದಲ್ಲಿ ಪರಸ್ಪರ ಒಂದಾಗುವುದು ಕನಸಿನ ಮಾತು. ಅವಕಾಶ ಸಿಕ್ಕಾಗಲೆಲ್ಲಾ ಕಾಂಗ್ರೆಸ್ ಯುವರಾಜನ ಕಾಲೆಳೆಯುವ ಪ್ರಧಾನಿ ಮೋದಿ ರಾಹುಲ್ ಗಾಂಧಿಗೆ ಶುಭಾಷಯ ಕೋರಿದ್ದಾರೆ.
ಇದಕ್ಕೆ ಕಾರಣ ರಾಹುಲ್ ಗಾಂಧಿ ಜನ್ಮ ದಿನ. ಕಾಂಗ್ರೆಸ್ ಉಪಾಧ್ಯಕ್ಷನ ಜನ್ಮ ದಿನಕ್ಕೆ ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಶುಭಾಷಯ ಸಂದೇಶ ಕಳುಹಿಸಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಜನುಮದಿನದ ಶುಭಾಷಯಗಳು. ಅವರಿಗೆ ದೇವರು ಆಯುರಾರೋಗ್ಯ ನೀಡಲಿ ಎಂದು ಪ್ರಧಾನಿ ಹಾರೈಸಿದ್ದಾರೆ.
ರಾಹುಲ್ ಗಾಂಧಿಗೆ ಇಂದು 47 ನೇ ಜನುಮದಿನ. ಸದ್ಯಕ್ಕೆ ವಿದೇಶ ಪ್ರವಾಸದಲ್ಲಿರುವ ರಾಹುಲ್ ಗೆ ಹಲವು ರಾಜಕಾರಣಿಗಳು ಶುಭ ಹಾರೈಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ