ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ನಿನ್ನೆ ತಡರಾತ್ರಿ ವಾರಣಾಸಿಯಲ್ಲಿ ರಾತ್ರಿ ರೌಂಡ್ಸ್ ನಡೆಸಿದ್ದು, ಇತ್ತೀಚೆಗೆ ಉದ್ಘಾಟನೆಗೊಂಡ ಹೆದ್ದಾರಿ ಪರಿಶೀಲನೆ ನಡೆಸಿದ್ದಾರೆ.
ರಾತ್ರಿ 11 ಗಂಟೆಗೆ ವಾರಣಾಸಿ ತಲುಪಿದ ಮೋದಿ ಶಿವಪುರ-ಪುಲ್ವಾರಿಯಾ-ಲಹರ್ತಾರಾ ಹೆದ್ದಾರಿ ಪರಿಶೀಲನೆ ನಡೆಸಿದರು. ಈ ಹೆದ್ದಾರಿ ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡಿತ್ತು. ಸುಮಾರು 360 ಕೋಟಿ ರೂ. ವೆಚಚದಲ್ಲಿ ಹೆದ್ದಾರಿ ನಿರ್ಮಾಣ ಮಾಡಲಾಗಿತ್ತು. ಇದರಿಂದ ಸುಮಾರು 5 ಲಕ್ಷ ಜನರಿಗೆ ಅನುಕೂಲವಾಗಲಿದೆ.
ಬಿಎಚ್ ಯುವಿನಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣದ ಅವಧಿಯನ್ನು ಒಂದು ಗಂಟೆಯಷ್ಟು ಕಡಿಮೆ ಮಾಡಲಿದೆ. ಹೆದ್ದಾರಿಯನ್ನು ಪರಿಶೀಲಿಸಿದ ಮೋದಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಮೋದಿ ಜೊತೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡಾ ಇದ್ದರು. ರಸ್ತೆಯಲ್ಲಿ ನಡೆದಾಡಿ ಪರಿಶೀಲನೆ ನಡೆಸಿದರು. ಈ ವೇಳೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ಇಂದು ವಾರಣಾಸಿಯಲ್ಲಿ ಮೋದಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 11.45 ರಿಂದ ವಾರಣಾಸಿಯಲ್ಲಿ ಸ್ವತಂತ್ರತಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅಮೂಲ್ ನ ದೊಡ್ಡ ಡೈರಿ ಘಟನೆ ಬನಾಸ್ ಡೈರಿ ಉದ್ಘಾಟನೆ ಮಾಡಲಿದ್ದಾರೆ.