ಅರವಿಂದ್ ಕೇಜ್ರಿವಾಲ್ ಭೇಟಿಯನ್ನು ತಿರಸ್ಕರಿಸಿದ ಪ್ರಧಾನಿ ನರೇಂದ್ರ ಮೋದಿ: ಆಪ್

ಮಂಗಳವಾರ, 30 ಜೂನ್ 2015 (15:44 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜಿಯಾಗಿದ್ದೇನೆ ಎಂದು ಹೇಳಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ನಿರಾಕರಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಮೂಲಗಳು ತಿಳಿಸಿವೆ.
 
ಕಳೆದ ವಾರ ಪ್ರಧಾನಿ ಮೋದಿಯವರ ಭೇಟಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದರು. ಆದರೆ, ಪ್ರಧಾನಿಯವರು ಪೂರ್ವನಿಮಿತ್ಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಭೇಟಿಯಾಗಲು ಸಾಧ್ಯವಿಲ್ಲ ಎಂದು ಪ್ರಧಾನಮಂತ್ರಿ ಕಚೇರಿಯ ಅಧಿಕಾರಿಗಳು ತಳ್ಳಿಹಾಕಿದ್ದರು. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅಥವಾ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿಗೆ ಕೂಡಾ ಅವಕಾಶ ನೀಡಲಿಲ್ಲ ಎಂದು ಆಮ್ ಆದ್ನಿ ಆರೋಪಿಸಿದೆ. 
 
ದೆಹಲಿಯ ಲೆಫ್ಟಿನೆಂಟ್ ಗೌವರ್ನರ್ ವಿವಾದ, ವಿದ್ಯುತ್ ಸಮಸ್ಯೆ ಸೇರಿದಂತೆ ಐದು ವಿಷಯಗಳ ಬಗ್ಗೆ ಚರ್ಚೆ ನಡೆಸಲು ಕಳೆದ 10 ದಿನಗಳ ಹಿಂದೆ ಕೇಜ್ರಿವಾಲ್ ಭೇಟಿಗಾಗಿ ಪತ್ರ ಬರೆದಿದ್ದರು. ಆದರೆ ಭೇಟಿಗೆ ನಿರಾಕರಿಸಲಾಗಿತ್ತು ಎಂದು ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಪ್ರದಾನಮಂತ್ರಿಯವರಿಗೆ ಸೆಲ್ಫಿ ಕ್ಲಿಕ್ಕಿಸಲು ಸೇರಿದಂತೆ ಪ್ರತಿಯೊಂದಕ್ಕೂ ಸಮಯವಿರುತ್ತದೆ. ಆದರೆ ಅವರಿಗೆ ದೆಹಲಿ ಮುಖ್ಯಮಂತ್ರಿಯನ್ನು ಭೇಟಿಯಾಗಲು ಸಮಯವಿಲ್ಲ ಎಂದು ಆಪ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿ ಮಾಡಿದ್ದರೂ ಸಂವಾದ ತೃಪ್ತಿಕರವಾಗಿರಲಿಲ್ಲ ಎಂದು ಆಮ್ ಆದ್ಮಿ ಪಕ್ಷದ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ