ಕಾಂಗ್ರೆಸ್ ಗೆ ವಿಶ್ ಮಾಡಿದ ಪಿಎಂ ನರೇಂದ್ರ ಮೋದಿ

ಭಾನುವಾರ, 14 ಮೇ 2023 (12:51 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿರುವ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ಶುಭ ಹಾರೈಸಿದ್ದು, ಅತ್ಯುತ್ತಮ ಆಡಳಿತ ನೀಡುವಂತೆ ಹಾರೈಸಿದ್ದಾರೆ.
 
ಚುನಾವಣೆ ಗೆಲುವಿನ ಕುರಿತಾಗಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ, ‘ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಅವರು ಈಡೇರಿಸಲಿ. ಅವರಿಗೆ ಹಾರೈಸುತ್ತೇನೆ’ ಎಂದು ಬರೆದಿದ್ದಾರೆ. ಆದರೆ, ಬಿಜೆಪಿ ಸೋಲಿನ ಬಗ್ಗೆ ಪ್ರಧಾನಿ ಒಂದಕ್ಷರ ಕೂಡ ಬರೆಯದೇ ಇರುವುದು ಅಚ್ಚರಿ ತಂದಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ