ಮೃತ ರೈತರಿಗೆ ಸೂಕ್ತ ಪರಿಹಾರ: ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ

ಮಂಗಳವಾರ, 6 ಜೂನ್ 2017 (18:18 IST)
ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತೆರಳಿದ ಹಿನ್ನೆಲೆಯಲ್ಲಿ ಪೊಲೀಸರು ಗೋಲಿಬಾರ್‌ ನಡೆಸಿದ್ದರಿಂದ ನಾಲ್ವರು ರೈತರು ಹತರಾದ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಶಿವರಾಜ್ ಸಿಂಗ್ ಚೌಹಾನ್, ಸಾವನ್ನಪ್ಪಿದ ಎಲ್ಲಾ ರೈತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. 
 
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರಕಾರ ಮತ್ತು ಕೇಂದ್ರ ಸರಕಾರದ ವಿರುದ್ಧ ರೈತ ಸಂಘಟನೆಗಳು ಭಾರಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದವು. 
 
ರಾಜ್ಯದ ಮಂಡಸೌರ್ ಜಿಲ್ಲೆಯಲ್ಲಿ ರೈತರು ಈರುಳ್ಳಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಆದರೆ, ಪೊಲೀಸರು ಅನಗತ್ಯವಾಗಿ ಲಾಠಿಚಾರ್ಜ್ ಮಾಡಿದ್ದಲ್ಲದೇ ಗೋಲಿಬಾರ್ ಕೂಡಾ ಮಾಡಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.
 
ಪೊಲೀಸರ ಕ್ರಮವನ್ನು ವಿರೋಧಿಸಿ ಆಕ್ರೋಶಗೊಂಡ ರೈತರು ಪೊಲೀಸ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೇ ಪೊಲೀಸ್ ವಾಹನಗಳನ್ನು ಜಖಂಗೊಳಿಸಿದರು. ಘಟನೆಯಲ್ಲಿ ನಾಲ್ವರು ರೈತರು ಸಾವನ್ನಪ್ಪಿ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ