ಸಿಮ್ ಕಾರ್ಡ್ ಡೀಲರ್‌ಗಳ ಪೊಲೀಸ್ ಪರಿಶೀಲನೆ ಕಡ್ಡಾಯ

ಶುಕ್ರವಾರ, 18 ಆಗಸ್ಟ್ 2023 (09:05 IST)
ನವದೆಹಲಿ : ಮೊಬೈಲ್ ಸಿಮ್ ಕಾರ್ಡ್ ಡೀಲರ್ಗಳ ಪೊಲೀಸ್ ಪರಿಶೀಲನೆ ಮತ್ತು ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ ಮಾಡಲಾಗಿದೆ. ಇದರ ಜೊತೆಗೆ ಎಲ್ಲಾ ಪಾಯಿಂಟ್ ಆಫ್ ಸೇಲ್ ಡೀಲರ್ಗಳ ನೋಂದಣಿಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಕಡ್ಡಾಯ ನಿಯಮ ಉಲ್ಲಂಘಿಸಿದರೆ 10 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದರು. 

ಸಂಚಾರ ಸಾಥಿ ಪೋರ್ಟಲ್ ಪ್ರಾರಂಭವಾದಾಗಿನಿಂದ ಅಕ್ರಮವಾಗಿ ಪಡೆದ 52 ಲಕ್ಷ ಸಂಪರ್ಕಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಲಾಗಿದೆ. ಮೊಬೈಲ್ ಸಿಮ್ ಕಾರ್ಡ್ಗಳನ್ನು ಮಾರಾಟ ಮಾಡುವ 67,000 ಡೀಲರ್ಗಳನ್ನು ಸರ್ಕಾರ ಕಪ್ಪು ಪಟ್ಟಿಗೆ ಸೇರಿಸಿದೆ. ಮೇ 2023 ರಿಂದ 300 ಸಿಮ್ ಕಾರ್ಡ್ ವಿತರಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಹಿಂದೆ ಜನರು ಮೊಬೈಲ್ ಸಿಮ್ ಕಾರ್ಡ್ಗಳನ್ನು ಬಲ್ಕ್ ರೀತಿ ಖರೀದಿಸುತ್ತಿದ್ದರು. ಸಿಮ್ ಕಾರ್ಡ್ ಬಲ್ಕ್ ಆಗಿ ಖರೀದಿಸಲು ಅವಕಾಶವಿತ್ತು. ಇನ್ನು ಮುಂದೆ ಇದನ್ನು ಕೊನೆಗೊಳಿಸಿ ಸರಿಯಾದ ವ್ಯಾಪಾರ ಸಂಪರ್ಕದ ನಿಬಂಧನೆಯನ್ನು ತರುತ್ತೇವೆ. ಇದರಿಂದಾಗಿ ಮೋಸದ ಕರೆಗಳನ್ನು ನಿಲ್ಲಿಸಲು ಸಹಾಯವಾಗಲಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ