ಬೆಂಗಳೂರಿನ ಚಂದ್ರಾಲೇಔಟ್ ನಗರದ ಶಾಲೆಯೊಂದರ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದು, ವಿದ್ಯಾರ್ಥಿಗಳ ಪ್ರವೇಶವನ್ನು ಶಿಕ್ಷಣ ಸಂಸ್ಥೆ ನಿರಾಕರಿಸಿದೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿಯೇ ಹಿಜಾಬ್ & ಕೇಸರಿ ಶಾಲು ಬಗ್ಗೆ ವದಂತಿ, ಸುಳ್ಳುಸುದ್ದಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ರೇ ಕಾನೂನು ಕ್ರಮ ಕೈಗೊಳ್ಳೋದಾಗಿ ಪೊಲೀಸ್ ಇಲಾಖೆ ಎಚ್ಚರಿಸಿದೆ.