ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಸಂತಾಪ ಸೂಚಿಸಿದ ರಾಜಕೀಯ ನಾಯಕರು

ಗುರುವಾರ, 24 ಸೆಪ್ಟಂಬರ್ 2020 (07:24 IST)
ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸಚಿವ ಸುರೇಶ್ ಅಂಗಡಿ ನಿಸ್ವಾರ್ಥ ಸೇವೆಯನ್ನ ರಾಷ್ಟ್ರ ಮತ್ತು ಪಕ್ಷ ಎಂದಿಗೂ ಮರೆಯಲ್ಲ. ಸುರೇಶ್ ಅಂಗಡಿಯವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು, ಚಿಕ್ಕ ವಯಸ್ಸಿನಲ್ಲಿಯೇ ಅಂಗಡಿಯವರು ನಮ್ಮನ್ನ ಅಗಲಿದ್ದಾರೆ, ಜನಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪು ಇಟ್ಟಿದ್ದರು, ಪಕ್ಷದ ಬೆಳವಣಿಗೆಗೆ ಅಂಗಡಿಯವರ ಪಾತ್ರ ಮುಖ್ಯವಾಗಿತ್ತು ಎಂದು ಸಂತಾಪ ಸೂಚಿಸಿದ್ದಾರೆ.
ಹಾಗೇ ಸಚಿವ ಸುರೇಶ್ ಅಂಗಡಿಯವರ ನಿಧನಕ್ಕೆ ರಾಜ್ಯ ನಾಯಕರಾಧ ಸಿಎಂ ಬಿಎಸ್ ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ