ಮೋರ್ಬಿ ದುರಂತವನ್ನ ರಾಜಕೀಯಗೊಳಿಸೋದು ಅಗೌರವ ಎಂದ ರಾಹುಲ್
ತೆಲಂಗಾಣದ ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅವರು ಪ್ರತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಇದನ್ನು ರಾಜಕೀಯಗೊಳಿಸುವುದಿಲ್ಲ ಎಂದು ಹೇಳಿದ್ದಾರೆ.
ಮೋರ್ಬಿ ಸೇತುವೆ ಕುಸಿತಕ್ಕೆ ಯಾರು ಹೊಣೆ ಎಂದು ನೀವು ಭಾವಿಸುತ್ತೀರಿ? ಎಂಬ ಪ್ರಶ್ನೆಗೆ ನಾನು ಈ ಘಟನೆಯನ್ನು ರಾಜಕೀಯಗೊಳಿಸಲು ಬಯಸೋದಿಲ್ಲ. ಜನರು ಅಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅದನ್ನು ರಾಜಕೀಯಗೊಳಿಸುವುದು ಅಗೌರವ. ನಾನು ಅದನ್ನು ಮಾಡಲು ಹೋಗುವುದಿಲ್ಲ ಎಂದಿದ್ದಾರೆ.