ನವದೆಹಲಿ, ಸೆ.7 : ವಿದ್ಯಾರ್ಥಿಗಳ ಭವಿಷ್ಯ ಕುರಿತಂತೆ ಕೇಂದ್ರ ಸರ್ಕಾರ ಕುರುಡು ನಿರ್ಧಾರಕ್ಕೆ ಮುಂದಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಅವರು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನ್ಯಾಯಯುತ ಅವಕಾಶ ಕಲ್ಪಿಸಿಕೊಡಬೇಕು ಎಂದು ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ.
ಸೆ.12 ರಂದು ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಆರ್ಹತೆ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿರುವ ಬೆನ್ನಲ್ಲೆ ಈ ಹೇಳಿಕೆ ನೀಡಿರುವ ಅವರು ನ್ಯಾಯಲಯದ ಆದೇಶದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ, ಆದರೆ, ವಿದ್ಯಾರ್ಥಿಗಳು ದಿಢೀರ್ ಪರೀಕ್ಷೆ ಎದುರಿಸಲು ಕಷ್ಟ ಸಾಧ್ಯವಾಗಿರುವುದರಿಂದ ಕೇಂದ್ರ ಸರ್ಕಾರ ತನ್ನ ನಿರ್ಧಾರದಲ್ಲಿ ಮರುಹೊಂದಾಣಿಕೆ ಮಾಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಸೆ.12ರ ಅಜುಬಾಜಿನಲ್ಲಿ ಇನ್ನಿತರ ಹಲವಾರು ಪರೀಕ್ಷೆಗಳಿರುವುದರಿಂದ ಕೇಂದ್ರ ಸರ್ಕಾರ ತನ್ನ ಕುರುಡು ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಅವರು ಟ್ವಿಟ್ ಮಾಡಿದ್ದಾರೆ.