ಪ್ರಜ್ವಲ್ ರೇವಣ್ಣ : ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

ಮಂಗಳವಾರ, 19 ಸೆಪ್ಟಂಬರ್ 2023 (10:54 IST)
ನವದೆಹಲಿ : ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಲೋಕಸಭೆಗೆ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠವು, ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. 

ಅಲ್ಲದೇ ಸಂಸತ್ ಕಲಾಪಕ್ಕೆ ಹಾಜರಾಗಲು ಅವಕಾಶ ನೀಡಿದೆ. ಆದರೆ ಸಂಸತ್ನಿಂದ ಬರುವ ಭತ್ಯೆ ಬಳಕೆ ಮಾಡದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮಧ್ಯಂತರ ತಡೆಯಿಂದ ಪ್ರಜ್ವಲ್ ರೇವಣ್ಣಗೆ ಚುನಾವಣಾ ಸ್ಪರ್ಧೆ ದಾರಿ ಸುಗಮವಾದಂತಾಗಿದೆ. ಹೆಚ್.ಡಿ.ರೇವಣ್ಣ ಪ್ರಕರಣವನ್ನು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸುಪ್ರೀಂ ಸೂಚನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ