2024ರ ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ ಇಬ್ಬರು ಬಂಡಾಯ ನಾಯಕರು!
ಮಂಗಳವಾರ, 24 ಮೇ 2022 (15:35 IST)
2024ರ ಲೋಕಸಭಾ ಚುನಾವಣೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿಯಲ್ಲಿ ಪ್ರಶಾಂತ್ ಕಿಶೋ ಅವರ ಮಾಜಿ ಆಪ್ತ ಹಾಗೂ ಬಂಡಾಯ ಘೋಷಿಸಿರುವ ಇಬ್ಬರು ನಾಯಕರು ಸ್ಥಾನ ಪಡೆದಿದ್ದಾರೆ.
2024ರ ಲೋಕಸಭಾ ಚುನಾವಣೆಗೆ ರಚಿಸಲಾಗಿರುವ ಕಾರ್ಯಪಡೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಗುಲಾಮ್ ನಬಿ ಆಜಾದ್ ಮತ್ತು ಆನಂದ್ ಶರ್ಮ ಸ್ಥಾನ ಪಡೆದಿದ್ದಾರೆ.
ವಿಶೇಷ ಅಂದರೆ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆ ವಿಷಯ ಅಂತ್ಯಗೊಂಡ ಬೆನ್ನಲ್ಲೇ ಅವರ ಮಾಜಿ ಆಪ್ತ ಸುನೀಲ್ ಕಾನುಗೋಡು ಸಮಿತಿಯಲ್ಲಿ ಸ್ಥಾನ ಪಡೆದಿರುವುದು ಅಚ್ಚರಿ ಮೂಡಿಸಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ಮಂಗಳವಾರ ಕರೆಯಲಾಗಿದ್ದ ಕಾಂಗ್ರೆಸ್ ಚುನಾವಣಾ ಕಾರ್ಯಪಡೆ ಸಭೆಯಲ್ಲಿ ಈ ಮೂವರು ಪಾಲ್ಗೊಂಡಿದ್ದು, ಪಕ್ಷದ ಕಾರ್ಯತಂತ್ರದ ಬಗ್ಗೆ ಕುತೂಹಲ ಮೂಡಿಸಿದೆ.