ಕಾಂಗ್ರೆಸ್ ಗೆ ಟಾನಿಕ್ ಆಗಲು ಚುನಾವಣಾ ಚಾಣಕ್ಷ್ಯ ಪ್ರಶಾಂತ್ ಕಿಶೋರ್ ಎಂಟ್ರಿ!
ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಹೇಗಾದರೂ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ವಿಪಕ್ಷಗಳು ಈಗಿನಿಂದಲೇ ತಯಾರಿ ಆರಂಭಿಸಿವೆ. ಕಾಂಗ್ರೆಸ್ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಗಳಲ್ಲೂ ಸೋತು ಸುಣ್ಣವಾಗಿತ್ತು. ಹೀಗಾಗಿ ಮತ್ತೆ ಫೀನಿಕ್ಸ್ ನಂತೆ ಮೇಲೆದ್ದು ಬರಲು ಪ್ರಶಾಂತ್ ಕಿಶೋರ್ ಮೊರೆ ಹೋಗಿದೆ ಎನ್ನಲಾಗಿದೆ.