ಲೋಕಸಮರಕ್ಕೆ ಮುಹೂರ್ತ ಫಿಕ್ಸ್; 7 ಹಂತಗಳಲ್ಲಿ ನಡೆಯಲಿದೆ ಚುನಾವಣೆ

ಸೋಮವಾರ, 11 ಮಾರ್ಚ್ 2019 (06:44 IST)
ನವದೆಹಲಿ : ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು,  ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ಕರೆದು ಈ ಬಗ್ಗೆ ಮಾಹಿತಿ ನೀಡಿದ್ದಾರೆ.


ಈ ಬಾರಿಯ ಲೋಕಸಭಾ ಚುನಾವಣೆ ಏಪ್ರಿಲ್ 11 ರಿಂದ ಆರಂಭವಾಗಿ ಮೇ 19 ವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿದ್ದು ಮೇ 23 ರಂದು  ಫಲಿತಾಂಶ ಪ್ರಕಟವಾಗಲಿದೆ. ಹಾಗೇ ನಿನ್ನೆಯಿಂದಲ್ಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂಬುದಾಗಿ ಮುಖ್ಯ ಚುನಾವಣಾ ಆಯುಕ್ತ ತಿಳಿಸಿದ್ದಾರೆ. 


ಮೊದಲ ಹಂತ ಚುನಾವಣೆ – ಏಪ್ರಿಲ್ 11

ಎರಡನೇ ಹಂತದ ಚುನಾವಣೆ – ಏಪ್ರಿಲ್ 18

ಮೂರನೇ ಹಂತದ ಚುನಾವಣೆ – ಏಪ್ರಿಲ್ 23

ನಾಲ್ಕನೇ ಹಂತದ ಚುನಾವಣೆ – ಏಪ್ರಿಲ್ 29

ಐದನೇ ಹಂತದ ಚುನಾವಣೆ – ಮೇ 6

ಆರನೇ ಹಂತದ ಚುನಾವಣೆ – ಮೇ 16

ಏಳನೇ ಹಂತಚ ಚುನಾವಣೆ – ಮೇ 19

ಕಳೆದ ಬಾರಿ ಕರ್ನಾಟಕದಲ್ಲಿ ಒಂದು ಹಂತದಲ್ಲಿ ಚುನಾವಣೆ ನಡೆದಿದ್ದರೆ, ಈ ಬಾರಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏ.18 ಗುರುವಾರ ಮೊದಲ ಹಂತ ನಡೆದರೆ ಏ.23 ಮಂಗಳವಾರ ಎರಡನೇ ಹಂತದ ಚುನಾವಣೆ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ