ರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟ ಆಚರಣೆ ರದ್ದು - ರಾಷ್ಟ್ರಪತಿ ರಾಮನಾಥ ಕೋವಿಂದ್
ಗುರುವಾರ, 7 ಜೂನ್ 2018 (14:02 IST)
ನವದೆಹಲಿ : ಧಾರ್ಮಿಕ ಆಚರಣೆಗಳಲ್ಲೊಂದಾದ ಇಫ್ತಾರ್ ಕೂಟವನ್ನು ಈ ವರ್ಷ ರಾಷ್ಟ್ರಪತಿ ಭವನದಲ್ಲಿಏರ್ಪಡಿಸದಿರಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರಪತಿಗಳ ಮಾಧ್ಯಮ ಕಾರ್ಯದರ್ಶಿ ಅಶೋಕ್ ಮಲಿಕ್ ಅವರು,’ ರಾಷ್ಟ್ರಪತಿ ಭವನ ಸಾರ್ವಜನಿಕ ಕಟ್ಟಡ. ಇಂತಹ ಜಾಗದಲ್ಲಿ ಜನರ ತೆರಿಗೆ ಹಣವನ್ನು ಬಳಸಿ ಯಾವುದೇ ಧಾರ್ಮಿಕ ಆಚರಣೆ ಅಥವಾ ಕಾರ್ಯಕ್ರಮ ಹಮ್ಮಿಕೊಳ್ಳದಿರಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತೀರ್ಮಾನಿಸಿದ್ದಾರೆ. ಈ ನಿರ್ಧಾರ ದೇಶದ ಜಾತ್ಯತೀತ ತತ್ವಕ್ಕೆ ಅನುಗುಣವಾಗಿದ್ದು, ಯಾವುದೇ ಧರ್ಮದ ಧಾರ್ಮಿಕ ವಿಧಿ/ಆಚರಣೆಗೆ ಅನ್ವಯವಾಗಲಿದೆ. ಆದರೆ, ಎಲ್ಲ ಧಾರ್ಮಿಕ ಹಬ್ಬಗಳ ಸಂದರ್ಭದಲ್ಲಿ ರಾಷ್ಟ್ರಪತಿ ಅವರು ದೇಶದ ಜನತೆಗೆ ಶುಭಾಶಯ ಕೋರಲಿದ್ದಾರೆ’ ಎಂದೂ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ