ಅಗಲಿದ ನಾಯಕಿ ಸುಷ್ಮಾ ಸ್ವರಾಜ್ ಗೆ ಅಂತಿಮ ನಮನ ಸಲ್ಲಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಬುಧವಾರ, 7 ಆಗಸ್ಟ್ 2019 (10:57 IST)
ನವದೆಹಲಿ : ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ರಾಷ್ಟ್ಪಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.ಇಂದು ಬೆಳಗ್ಗೆ ಸುಷ್ಮಾ ಸ್ವರಾಜ್ ನಿವಾಸಕ್ಕೆ ತೆರಳಿದ ರಾಷ್ಟ್ಪಪತಿ ರಾಮನಾಥ್ ಕೋವಿಂದ್ ಅಗಲಿದ ನಾಯಕಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಸುಷ್ಮಾ ಸ್ವರಾಜ್ ಅವರನ್ನು ಕಳೆದುಕೊಂಡು ದುಃಖಿಸುತ್ತಿದ್ದ ಅವರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.


ಬಿಜೆಪಿ ಸೇರಿದಂತೆ ಹಲವು ಪಕ್ಷಗಳ ರಾಜಕೀಯ ನಾಯಕರು, ಗಣ್ಯರು ಬೆಳಗ್ಗೆಯಿಂದಲೇ ಸುಷ್ಮಾ ನಿವಾಸಕ್ಕೆ ಆಗಮಿಸಿ ಜನನಾಯಕಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ