ಮಾರ್ಚ್ 27 ರಂದು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಪ್ರಧಾನ

ಬುಧವಾರ, 25 ಮಾರ್ಚ್ 2015 (17:29 IST)
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಾರ್ಚ್ 27 ರಂದು ನೀಡಲಾಗುವುದು ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವೈಯಕ್ತಿಕವಾಗಿ ಮಾಜಿ ಪ್ರದಾನಿ ವಾಜಪೇಯಿ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎನ್ನಲಾಗಿದೆ.  

ಕೇಂದ್ರದಲ್ಲಿ ಅಧಿಕಾರರೂಢವಾಗಿರುವ ನರೇಂದ್ರ ಮೋದಿ ನೇತೃತ್ವದ ಸರಕಾರ ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮದನ್ ಮೋಹನ್ ಮಾಳವಿಯಾ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಿದೆ.

ವಿಜ್ಞಾನಿ ಸಿ.ವಿ.ರಾಮನ್, ಸಚಿನ್ ತೆಂಡೂಲ್ಕರ್, ಗಾಯಕಿ ಲತಾ ಮಂಗೇಶ್ಕರ್ ಮತ್ತು ರಾಜಕಾರಣಿ ಸಿ.ರಾಜಗೋಪಾಲಚಾರಿ ಸೇರಿದಂತೆ ದೇಶದಲ್ಲಿ ಇಲ್ಲಿಯವರೆಗೆ 43 ಗೌರವಾನ್ವಿತರಿಗೆ ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ