ತಿರುಪತಿ ಸನ್ನಿಧಾನಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಬುಧವಾರ, 1 ಜುಲೈ 2015 (15:48 IST)
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ವೆಂಕಟೇಶ್ವರ ದೇವರ ಸನ್ನಿದಿಯಾದ ತಿರುಮಲಾಗೆ ಆಗಮಿಸಿದ್ದು ಪೂಜೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಹೈದಾಬಾದ್ ಮೂಲಕ ತಿರುಪತಿಗೆ ಆಗಮಿಸಿದ ಪ್ರಣಬ್ ಮುಖರ್ಜಿ, ಸುಮಾರು ಎಂಟು ಗಂಟೆಗಳ ಕಾಲ ನಾಲ್ಕು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ. 
 
ತಿರುಪತಿಯಿಂದ 15 ಕಿ.ಮೀ ದೂರದಲ್ಲಿರುವ ತಿರುಪತಿ ವಿಮಾನನಿಲ್ದಾಣಕ್ಕೆ ಬಂದಿಳಿದ ಮುಖರ್ಜಿ, ವೆಂಕಟೇಶ್ವರ ದೇವಾಲಯಕ್ಕೆ ತೆರಳುವ ಮುನ್ನ ಮೊದಲಿಗೆ ತಿರುಚೂನರ್‌ನಲ್ಲಿರುವ ಶ್ರೀ ಪದ್ಮಾವತಿ ದೇವಾಲಯಕ್ಕೆ ಭೇಟಿ ನೀಡಿದರು ನಂತರ ಕಪಿಲೇಶ್ವರ್ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ.
 
ವೆಂಕಟೇಶ್ವರ್ ದೇವಾಲಯಕ್ಕೆ ಹತ್ತಿರವಿರುವ ಶ್ರೀ ಲಕ್ಷ್ಮಿ ವರಹಾಸ್ವಾಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಪೂಜೆಗೈದಿದ್ದಾರೆ.
 
ರಾಷ್ಟ್ರಪತಿಯವರ ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮತ್ತು ರಾಜ್ಯಪಾಲ ಇಎಸ್ಎಲ್, ನರಸಿಂಹನ್ ಕೂಡಾ ಉಪಸ್ಥಿತರಿದ್ದರು. ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮುಖರ್ಜಿ ಎರಡನೇ ಬಾರಿಗೆ ತಿರುಪತಿ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ.
 
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ ಹಿನ್ನೆಲೆಯಲ್ಲಿ ತಿರುಮಲಾದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು ಎಂದು ಹಿರಿಯ. ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ