ರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ : ನಾಮಪತ್ರ ಸಲ್ಲಿಕೆ
ಈವೆರೆಗೆ ರಾಷ್ಟ್ರಪತಿ ಚುನಾವಣೆಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ದಾಖಲೆಗಳ ಕೊರತೆಯಿಂದಾಗಿ ಓರ್ವ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ.
ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ರಾಷ್ಟ್ರಪತಿಯಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಮುಗಿಯಲಿದ್ದು, ಆ ಸ್ಥಾನಕ್ಕೆ ಚುನಾವಣೆಗಾಗಿ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ.
ನಾಮನಿರ್ದೇಶನ ಪ್ರಕ್ರಿಯೆಯೂ ಪ್ರಾರಂಭವಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜೂನ್ 29ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಚುನಾವಣೆಯ ಭದ್ರತಾ ಠೇವಣಿ 15 ಸಾವಿರ ರೂ. ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ.