ಮನಮೋಹನ್ ಸಿಂಗ್ ದೇಶ ಬದ್ಧತೆಯನ್ನು ಪ್ರಧಾನಿ ಪ್ರಶ್ನಿಸಿಲ್ಲ- ಅರುಣ್ ಜೇಟ್ಲಿ

ಬುಧವಾರ, 27 ಡಿಸೆಂಬರ್ 2017 (21:00 IST)
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ದೇಶ ಬದ್ಧತೆಯನ್ನು ನರೇಂದ್ರ ಮೋದಿ ಅವರು ಪ್ರಶ್ನಿಸಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿದ ಅರುಣ್ ಜೇಟ್ಲಿ ಅವರು ಗುಜರಾತ್ ಚುನಾವಣೆ ಪ್ರಚಾರದ ವೇಳೆ ನರೇಂದ್ರ ಮೋದಿ ಅವರು ಮನಮೋಹನ್ ಸಿಂಗ್ ಮತ್ತು ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ದೇಶ ಬದ್ಧತೆಯನ್ನು ಪ್ರಶ್ನಿಸಿಲ್ಲ, ಪ್ರಶ್ನಿಸುವ ಉದ್ದೇಶ ಹೊಂದಿರಲಿಲ್ಲ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ಹೇಳಿಕೆ ಸಂಬಂಧಿಸಿ ಸಂಸತ್ ನ ಉಭಯ ಸದನಗಳಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಆದ್ದರಿಂದ ಅರುಣ್ ಜೇಟ್ಲಿ ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಅರುಣ್ ಜೇಟ್ಲಿ ಹೇಳಿಕೆಯನ್ನು ಕಾಂಗ್ರೆಸ್ ಸ್ವಾಗತಿಸಿದ್ದು, ಮಣಿಶಂಕರ್ ಅಯ್ಯರ್ ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ.
ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಮೋದಿ ಹೇಳಿಕೆಗೆ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಪಟ್ಟುಹಿಡಿದಿತ್ತು. ಕ್ಷಮೆ ಕೇಳಬೇಕು ಎಂದೂ ಆಗ್ರಹಿಸಿತ್ತು. ಇದರಿಂದ ಒಂದು ವಾರದಿಂದ ಕಲಾಪಕ್ಕೆ ಅಡ್ಡಿಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ