ಭಾರತ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Sampriya

ಶನಿವಾರ, 30 ಮಾರ್ಚ್ 2024 (18:32 IST)
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಬಿಜೆಪಿ ನಾಯಕ ಎಲ್‌ ಕೆ ಅಡ್ವಾನಿ ಸೇರಿದಂತೆ ಐವರಿಗೆ ಭಾರತ ರತ್ನ ನೀಡಿದರು.

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್ ಹಾಗೂ ಪಿ.ವಿ.ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಡಾ. ಎಂ.ಎಸ್.ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ಶನಿವಾರ ಭಾರತ ರತ್ನ ಪ್ರದಾನ ಮಾಡಲಾಯಿತು. ಭಾರತ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಹೇಳಿದ್ದಾರೆ.

"ಪ್ರತಿಯೊಬ್ಬ ಭಾರತೀಯನು ಪಿವಿ ನರಸಿಂಹ ರಾವ್ ಅವರು ನಮ್ಮ ದೇಶಕ್ಕಾಗಿ ಮಾಡಿದ್ದನ್ನು ಗೌರವಿಸುತ್ತಾರೆ ಮತ್ತು ಅವರಿಗೆ ಭಾರತ ರತ್ನ ನೀಡಿದ್ದಕ್ಕಾಗಿ ಹೆಮ್ಮೆ ಪಡುತ್ತಾರೆ. ಅವರು ನಮ್ಮ ದೇಶದ ಪ್ರಗತಿ ಮತ್ತು ಆಧುನೀಕರಣವನ್ನು ಹೆಚ್ಚಿಸಲು ವ್ಯಾಪಕವಾಗಿ ಶ್ರಮಿಸಿದವರು. ಅವರು ಗೌರವಾನ್ವಿತ ವಿದ್ವಾಂಸ ಮತ್ತು ಚಿಂತಕರಾಗಿಯೂ ಹೆಸರುವಾಸಿಯಾಗಿದ್ದಾರೆ. ಅವರ ಕೊಡುಗೆಗಳು ಎಂದೆಂದಿಗೂ ಜೀವಂತ ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

'ಭಾರತದ ಅಭಿವೃದ್ಧಿಗೆ, ವಿಶೇಷವಾಗಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ಚರಣ್ ಸಿಂಗ್ ಅಪಾರ ಕೊಡುಗೆ ನೀಡಿದ್ದಾರೆ. ಈ ಗೌರವವು ಅವರು ಪ್ರತಿಪಾದಿಸಿದ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಸಾರ್ವಜನಿಕ ಸೇವೆಯ ಮೌಲ್ಯಗಳನ್ನು ಎತ್ತಿ ಹಿಡಿಯಲು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ' ಎಂದು ಪ್ರಧಾನಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ