ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿದ ಬಿಜೆಪಿ, ಎನ್ ಸಿಪಿ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಶನಿವಾರ, 23 ನವೆಂಬರ್ 2019 (10:02 IST)
ನವದೆಹಲಿ : ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿದ ಬಿಜೆಪಿ, ಎನ್ ಸಿಪಿ ಪಕ್ಷದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.


ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಹಾಗೂ ಉಪಮುಖ್ಯಮಂತ್ರಿಯಾಗಿ ಎನ್ ಸಿಪಿಯ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

ಈ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ಸಿಎಂ ಮತ್ತು ಡಿಸಿಎಂ ಆಗಿ  ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫಡ್ನವೀಸ್ ಹಾಗೂ ಅಜಿತ್ ಪವಾರ್  ಅವರಿಗೆ ಅಭಿನಂದನೆಗಳು. ಮಹಾರಾಷ್ಟ್ರದ ಉಜ್ವಲ ಬವಿಷ್ಯಕ್ಕಾಗಿ ಅವರು ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ