ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗೇಮಿಂಗ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಭಾರತದ ಪ್ರಮುಖ ಯುವ ಆಟಗಾರರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಬಗ್ಗೆ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಕಿರು ವಿಡಿಯೊ ತುಣುಕಿನೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಗೇಮಿಂಗ್ ಕ್ಷೇತ್ರದಲ್ಲಿ ಹೊಸ ಬೆಳವಣಿಗೆ ಕುರಿತ ಚರ್ಚೆಯ ಜತೆಗೆ ಕೇಂದ್ರದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ಆಗಿರುವ ಬದಲಾವಣೆ, ಕೌಶಲಭರಿತ ಗೇಮರ್‌ಗಳಿಂದ ಉದ್ಯಮದ ಬೆಳವಣಿಗೆ ಮೂಲಕ ಆಗುತ್ತಿರುವ ಲಾಭದ ಕುರಿತೂ ಚರ್ಚೆ ನಡೆಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಗೇಮರ್‌ಗಳು ಈ ವೇಳೆ ಜೂಜು ಮತ್ತು ಗೇಮಿಂಗ್ ನಡುವಿನ ವ್ಯತ್ಯಾಸ ಕುರಿತು ಹೇಳಿಕೊಂಡರು.