ಮಹಿಳಾ ಮೀಸಲಾತಿ ಜಾರಿಗೆ ಪ್ರಧಾನಿ ಮೋದಿ ಪ್ಲ್ಯಾನ್

ಮಂಗಳವಾರ, 19 ಸೆಪ್ಟಂಬರ್ 2017 (12:19 IST)
ತ್ರಿವಳಿ ತಲಾಖ್‌ ರದ್ದುಗೊಳಿಸಿ ಮಹಿಳೆಯರ ಮನಗೆದ್ದಿರುವ ಪ್ರಧಾನಿ ಮೋದಿ,ಇದೀಗ ಮಹಿಳಾ ಮೀಸಲಾತಿ ಜಾರಿಗೆ ಪ್ಲ್ಯಾನ್‌ ರೂಪಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಹಿಳಾ ಮೀಸಲಾತಿ ಜಾರಿಗೊಳಿಸಿದಲ್ಲಿ ಶೇ.33 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಾಗಿರಸಬೇಕಾಗುತ್ತದೆ. ಹಿಂದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ ಎನ್ನಲಾಗಿದೆ.
 
ಮಹಿಳಾ ಮೀಸಲಾತಿ ಜಾರಿಗೆ ಕಾಂಗ್ರೆಸ್ ಪಕ್ಷ ಕೂಡಾ ಬೆಂಬಲಿಸುತ್ತಿರುವುದರಿಂದ ಮಸೂದೆ ಜಾರಿಗಾಗಿ ಪ್ರಧಾನಿ ಮೋದಿ ಸರಕಾರಕ್ಕೆ ಯಾವುದೇ ಅಡೆತಡೆಗಳಿಲ್ಲ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
 
ಮುಂಬರುವ 2019ರ ಲೋಕಸಭೆ ಚುನಾವಣೆಯೊಳಗೆ ಮಹಿಳಾ ಮೀಸಲಾತಿ ಜಾರಿಗೊಳಿಸಿ ಮಹಿಳಾ ಮತದಾರರ ಮನಗೆಲ್ಲುವ ಬಗ್ಗೆ ಪ್ರಧಾನಿ ಮೋದಿ ಪ್ಲ್ಯಾನ್ ರೂಪಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ