ಮೂರನೇ ಬಾರಿ ಪ್ರಧಾನಿ ಮೋದಿ ಪ್ರಮಾಣ ವಚನ: ಬಾಂಗ್ಲಾ, ಶ್ರೀಲಂಕಾ ಪ್ರಧಾನಿಗೆ ಆಹ್ವಾನ

sampriya

ಗುರುವಾರ, 6 ಜೂನ್ 2024 (15:03 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ತಾವು ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಫೋನ್​​ ಕರೆ ಮೂಲಕ ತಿಳಿಸಿದ್ದಾರೆ. ಅವರು ಪ್ರಧಾನಿ ಮೋದಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಬಿಜೆಪಿ ಈಗಾಗಲೇ 240 ಸ್ಥಾನಗಳನ್ನು ಪಡೆದುಕೊಂಡಿದೆ. ಎನ್​ಡಿಎ ಮೈತ್ರಿಕೂಟ ಸರಳ ಬಹುಮತ ಪಡೆದು ಅಧಿಕಾರ ರಚನೆಯತ್ತ ಹೆಜ್ಜೆ ಹಾಕಿದೆ. ಈಗಾಗಲೇ ಎನ್​​​ಡಿಎ ಲೋಕಸಭೆಯ 543 ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆದ್ದಿದೆ.  ಶನಿವಾರ ಪ್ರಧಾನಿ ಮೋದಿ ಪ್ರಮಾನವಚನ ಸ್ವೀರಿಸುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ