ನವದೆಹಲಿ : ದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಕರೆಯಲಾಗಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಬೆಳಿಗ್ಗೆ 11ಕ್ಕೆ ಸಂಪುಟ ಸಭೆ ನಡೆಯಲಿದೆ. ಸಂಪುಟ ಸಭೆಗೂ ಮುನ್ನ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಹಣಕಾಸು ಸ್ಥಿತಿ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಆರ್ಥಿಕ ಕುಸಿತ ತಡೆಗೆ ಪರ್ಯಾಯ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದು, ಕೆಲ ವಿನಾಯಿತಿ ಮೂಲಕ ಆರ್ಥಿಕ ಚೇತರಿಕೆಗೆ ಪ್ರಯತ್ನ ಪಡಲಾಗುವುದು ಎನ್ನಲಾಗಿದೆ.
ಹಾಗೇ ಈ ನಡುವೆ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆಯೂ ಚರ್ಚೆನಡೆಸಲಿದ್ದು, ಸಭೆಯ ಬಳಿಕ ಮಹತ್ವದ ನಿರ್ಧಾರಗಳ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.