ಪ್ರಿಯಾಂಕಾ ವಾರಣಾಸಿಯಲ್ಲಿ ಸ್ಪರ್ಧಿಸಿದರೆ ಪ್ರಧಾನಿ ಮೋದಿ ಸೋಲ್ತಾರೆ : ಸಂಜಯ್ ರಾವತ್

ಸೋಮವಾರ, 14 ಆಗಸ್ಟ್ 2023 (11:25 IST)
ಮುಂಬೈ : ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಪ್ರಧಾನಿ ನರೇಂದ್ರ ಮೋದಿ ಸೋಲಬಹುದು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿಕೆ ನೀಡಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಪ್ರತಿನಿಧಿಸುವ ಕ್ಷೇತ್ರವಾದ ವಾರಣಾಸಿಯಿಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ, ಆಘಾತಕಾರಿ ಫಲಿತಾಂಶಗಳು ಬರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ರಾಜಕೀಯ ಪರಿಸ್ಥಿತಿ ವೇಗವಾಗಿ ಬದಲಾಗುತ್ತಿದೆ. ಕಾಂಗ್ರೆಸ್ ಜನರಿಂದ ಬೆಂಬಲ ಪಡೆಯುತ್ತಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಪ್ರಧಾನಿ ಮೋದಿ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟ. ಮೋದಿ ಅವರನ್ನು ಪ್ರಿಯಾಂಕಾ ಸೋಲಿಸಬಹುದು ಎಂದು ಮಾತನಾಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ