ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಶುಭಕೋರಿದ ಪ್ರಧಾನಿ ಮೋದಿ
ನವದೆಹಲಿ :ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ. ಬುಧವಾರ ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ ,ಕುಗ್ಗಿಸಲಾರದ ಚೇತನವಾದ ಹೆಣ್ಣು ಮಕ್ಕಳಿಗೆ ನಮನಗಳು ಎಂದು ಹೇಳಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಪ್ರತಿಯೊಬ್ಬ ಹೆಣ್ಣುಮಗು ತೋರುವ ಬದ್ದತೆ ಸಾಮರ್ಥ್ಯವನ್ನು ನಾವು ಗುರುತಿಸುತ್ತಿದ್ದೇವೆ. ಅವರು ನಮ್ಮ ಸಮಾಜ ಹಾಗೂ ರಾಷ್ಟ್ರವನ್ನು ಬದಲಿಸುವ ಪ್ರವರ್ತಕರಾಗಿದ್ದಾರೆ ಎಂದು ಪ್ರಧಾನಿ ಮೋದಿ ಪುತ್ರಿಯರ ಸಂಕುಲವನ್ನು ಶ್ಲಾಘಿಸಿದ್ದಾರೆ.
ಕಳೆದೊಂದು ದಶಕದಲ್ಲಿ ನಮ್ಮ ಸರ್ಕಾರವು ರಾಷ್ಟ್ರನಿರ್ಮಣದಲ್ಲಿ ತೊಡಗಿಸಿಕೊಳ್ಳಲು ಪ್ರತಿಯೊಂದು ಹೆಣ್ಣುಮಗುವಿಗೂ ಅವಕಾಶ ನೀಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.